ಪ್ರಲಾಪಗಳು 1:3 - ಪರಿಶುದ್ದ ಬೈಬಲ್3 ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.