ಪ್ರಲಾಪಗಳು 1:4 - ಪರಿಶುದ್ದ ಬೈಬಲ್4 ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ. ಅಧ್ಯಾಯವನ್ನು ನೋಡಿ |
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.