Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:5 - ಪರಿಶುದ್ದ ಬೈಬಲ್‌

5 ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಶಿರಸ್ಸಾದರು, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಹಸುಮಕ್ಕಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:5
38 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


ನಮ್ಮ ಶತ್ರುಗಳೆಲ್ಲಾ ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.”


ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.


ಅವನ ಶತ್ರುಗಳಿಗೆಲ್ಲಾ ನೀನು ಸಂತೋಷವನ್ನುಂಟು ಮಾಡಿರುವೆ. ಅವನ ಶತ್ರುಗಳಿಗೆ ಯುದ್ಧದಲ್ಲಿ ಜಯವಾಗುವಂತೆ ಮಾಡಿರುವೆ.


ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.


ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ಏಕೆಂದರೆ ನಾನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ನನ್ನ ಜನರು ಮಾಡಿದರು. ಅವರ ಪೂರ್ವಿಕರು ಈಜಿಪ್ಟಿನಿಂದ ಹೊರಬಂದ ದಿನದಿಂದ ಅವರು ನನ್ನನ್ನು ರೇಗಿಸಿದರು.


“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು