ಪ್ರಲಾಪಗಳು 1:8 - ಪರಿಶುದ್ದ ಬೈಬಲ್8 ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”
“ಆದರೆ ನೀನಾಗಲಿ ನಿನ್ನ ಮಕ್ಕಳಾಗಲಿ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟುಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳೀಪಟ ಮಾಡುತ್ತೇನೆ.