ಪ್ರಲಾಪಗಳು 1:9 - ಪರಿಶುದ್ದ ಬೈಬಲ್9 ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ]. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.” ಅಧ್ಯಾಯವನ್ನು ನೋಡಿ |
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು