Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:12 - ಪರಿಶುದ್ದ ಬೈಬಲ್‌

12 ಆ ಮಕ್ಕಳು ತಮ್ಮ ತಾಯಂದಿರನ್ನು, “ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?” ಎಂದು ಕೇಳುತ್ತಿದ್ದಾರೆ. ಅವರು ಅಸುನೀಗುವಾಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣಬಿಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು ಅಸುರುಸುರಾಗಿ ಅಮ್ಮಾ ತಿನ್ನಲಿಕ್ಕೆ ಇಲ್ಲವೋ, ಕುಡಿಯಲಿಕ್ಕೆ ಇಲ್ಲವೋ ಎಂದು ಗೋಳಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಗರದ ಬೀದಿಗಳಲ್ಲಿ ಗಾಯಪಟ್ಟವರ ಹಾಗೆ ಮೂರ್ಛೆ ಹೋದಾಗ, ತಮ್ಮ ತಾಯಂದಿರ ಎದೆಯಲ್ಲಿ ಪ್ರಾಣ ಸುರಿದಾಗ, “ತಿನ್ನಲಿಕ್ಕೆ ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ?” ಎಂದು ತಮ್ಮ ತಾಯಂದಿರಿಗೆ ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:12
9 ತಿಳಿವುಗಳ ಹೋಲಿಕೆ  

ಬಾಬಿಲೋನಿನ ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವುದು.


ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


“ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ.


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.


ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು