Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:13 - ಪರಿಶುದ್ದ ಬೈಬಲ್‌

13 ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆರೂಸಲೇಮ್ ಯುವತಿಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಉದಾಹರಣೆಯನ್ನು ಎಲ್ಲಿ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:13
14 ತಿಳಿವುಗಳ ಹೋಲಿಕೆ  

ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


“ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.


ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.


ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನೆಂದರೆ: “ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.


‘ಆ ಹೆಂಗಸರು, ಬೇಗನೆ ಬಂದು ನಮಗಾಗಿ ಗೋಳಾಡಲಿ. ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.


ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.


“ಪಾತಾಳಕ್ಕೆ ಸೇರಿದ ಜನರನ್ನು ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು