Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:14 - ಪರಿಶುದ್ದ ಬೈಬಲ್‌

14 ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:14
31 ತಿಳಿವುಗಳ ಹೋಲಿಕೆ  

“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.


ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.


ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.


ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.


ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”


ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”


ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು