ಪ್ರಲಾಪಗಳು 2:15 - ಪರಿಶುದ್ದ ಬೈಬಲ್15 ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ. ಯೆರೂಸಲೇಮ್ ನಗರಿಯನ್ನು ಕಂಡು - ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನಿಸಿಕೊಳ್ಳುತ್ತಿದ್ದ ಪುರಿಯು ಇದೇಯೋ? ಛೀ ಛೀ ಎಂದು ತಲೆಯಾಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ? ಅಧ್ಯಾಯವನ್ನು ನೋಡಿ |
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.