ಪ್ರಲಾಪಗಳು 2:16 - ಪರಿಶುದ್ದ ಬೈಬಲ್16 ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿತೆರೆದಿದ್ದಾರೆ. “ನಾವು ಆಕೆಯನ್ನು ನುಂಗಿಬಿಟ್ಟೆವು. ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ. ಅದನ್ನು ನಾವು ಕಣ್ಣಾರೆ ಕಂಡಿದ್ದೇವೆ,” ಎಂದು ಅವರು ಕೊಚ್ಚಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |
“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.