ಪ್ರಲಾಪಗಳು 2:20 - ಪರಿಶುದ್ದ ಬೈಬಲ್20 ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ? ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’