ಪ್ರಲಾಪಗಳು 2:22 - ಪರಿಶುದ್ದ ಬೈಬಲ್22 ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ. ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’