ಪ್ರಲಾಪಗಳು 2:4 - ಪರಿಶುದ್ದ ಬೈಬಲ್4 ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ ವಿರೋಧಿಯಂತೆ ಬಲಗೈಯೆತ್ತಿ ನಿಂತು ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’