Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:9 - ಪರಿಶುದ್ದ ಬೈಬಲ್‌

9 ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:9
27 ತಿಳಿವುಗಳ ಹೋಲಿಕೆ  

ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.


ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಧಿಪತಿಯ ಅಧಿನದಲ್ಲಿತ್ತು.


ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.


ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.


ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ.


ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.


ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.


“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”


“ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು