Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:1 - ಪರಿಶುದ್ದ ಬೈಬಲ್‌

1 ಯೆಹೋವನ ರೌದ್ರ ದಂಡದಿಂದ ಸಂಕಟವನ್ನು ಅನುಭವಿಸಿರುವವನು ನಾನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನ ಕೋಪವೆಂಬ ಕೋಲಿನಿಂದಲೇ ಪೆಟ್ಟುತಿಂದ ವ್ಯಕ್ತಿಯೆಂದರೆ ನಾನೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:1
12 ತಿಳಿವುಗಳ ಹೋಲಿಕೆ  

ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದಲೇ ನನ್ನನ್ನು ಶಿಕ್ಷಿಸಿದೆ.


“ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.


ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.


ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.


ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು