ಪ್ರಲಾಪಗಳು 3:15 - ಪರಿಶುದ್ದ ಬೈಬಲ್15 ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ನನಗೆ ಕಹಿಯಾದ ಆಹಾರವನ್ನು ಅಡಚಿ ವಿಷಪದಾರ್ಥದಿಂದ ನನ್ನನ್ನು ತಣಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”