ಪ್ರಲಾಪಗಳು 3:17 - ಪರಿಶುದ್ದ ಬೈಬಲ್17 ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದುಕೊಂಡೆನು. ನಾನು ಸಂತೋಷವನ್ನು ಮರೆತುಬಿಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಶಾಂತಿಸಮಾಧಾನಕ್ಕೆ ನಾನು ದೂರವಾದೆ ಸುಖಸಂತೋಷವನ್ನು ಮರೆತುಹೋದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದೀ; ನಾನು ಸುಖವನ್ನು ಮರೆತುಬಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ, ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.