ಪ್ರಲಾಪಗಳು 3:19 - ಪರಿಶುದ್ದ ಬೈಬಲ್19 ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಪಟ್ಟ ಕಷ್ಟದುಃಖವನ್ನು ಮನಸ್ಸಿಗೆ ತಂದುಕೊಂಡಾಗ ಆಗುತ್ತಿದೆ ನನಗೆ ಕಹಿಯಾದ ಅನುಭವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಅಲೆದು ಕಷ್ಟಪಟ್ಟದ್ದನ್ನು ಚಿತ್ತಕ್ಕೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕ ಮಾಡಿಕೋ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು, ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.