ಪ್ರಲಾಪಗಳು 3:25 - ಪರಿಶುದ್ದ ಬೈಬಲ್25 ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರ ಒಳ್ಳೆಯವನು ಆತನನ್ನು ನಿರೀಕ್ಷಿಸುವವರಿಗೆ ಆತನನ್ನು ಹರಸಿ ಹಂಬಲಿಸುವ ಜನರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.