Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:29 - ಪರಿಶುದ್ದ ಬೈಬಲ್‌

29 ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಣ್ಣು ಮುಕ್ಕಬೇಕಾಗಿ ಬಂದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಒಂದು ವೇಳೆ ಸುಗತಿಯಾದೀತೆಂದು ತನ್ನ ಬಾಯಿಯನ್ನು ದೂಳಿಗೆ ಮುಟ್ಟಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಂದು ವೇಳೆ ನಿರೀಕ್ಷೆ ಇರಬಹುದೇನೋ ಎಂದು ಅವನು ತನ್ನ ಮುಖವನ್ನು ಧೂಳಿನಲ್ಲಿ ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:29
12 ತಿಳಿವುಗಳ ಹೋಲಿಕೆ  

“ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಆದ್ದರಿಂದ ಇಸ್ರೇಲೇ, ನಿನ್ನ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಬರುವರೆಂಬ ನಿರೀಕ್ಷೆ ನಿನಗಿರಲಿ.” ಇದು ಯೆಹೋವನ ನುಡಿ.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


“ನಾನು ಬಹು ದುಃಖಿತನಾಗಿದ್ದೇನೆ; ಗೋಣಿತಟ್ಟನ್ನು ಸುತ್ತಿಕೊಂಡಿದ್ದೇನೆ; ಸೋತುಹೋದೆನೆಂದು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು