ಪ್ರಲಾಪಗಳು 3:37 - ಪರಿಶುದ್ದ ಬೈಬಲ್37 ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು? ಅಧ್ಯಾಯವನ್ನು ನೋಡಿ |
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.