ಪ್ರಲಾಪಗಳು 3:39 - ಪರಿಶುದ್ದ ಬೈಬಲ್39 ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಮನುಷ್ಯನಿಗೆ ಜೀವವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗೊಣಗುಟ್ಟುವುದೇಕೆ? ಅಧ್ಯಾಯವನ್ನು ನೋಡಿ |
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.