Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:44 - ಪರಿಶುದ್ದ ಬೈಬಲ್‌

44 ನೀನು ನಿನಗೆ ಮೋಡಗಳನ್ನು ಹೊದಿಸಿಕೊಂಡು ನಮ್ಮ ಯಾವ ಪ್ರಾರ್ಥನೆಯೂ ನಿನ್ನ ಬಳಿಗೆ ಬಾರದಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ನಮ್ಮ ಪ್ರಾರ್ಥನೆಯು ನಿನ್ನ ಸನ್ನಿಧಿಗೆ ಸೇರದಂತೆ ನಿನ್ನನ್ನು ಮೇಘದಿಂದ ಮುಚ್ಚಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:44
8 ತಿಳಿವುಗಳ ಹೋಲಿಕೆ  

ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಆಗ ಯೆಹೋವನು, “ಯೆರೆಮೀಯನೇ, ಯೆಹೂದದ ಜನರ ಒಳಿತಿಗಾಗಿ ಪ್ರಾರ್ಥಿಸಬೇಡ.


ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?


ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು