Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:52 - ಪರಿಶುದ್ದ ಬೈಬಲ್‌

52 ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 “ಹಕ್ಕಿಯನ್ನು ಬೇಟೆಯಾಡುವವರೋ ಎಂಬಂತೆ ನಿಷ್ಕಾರಣ ವೈರಿಗಳು ಬೆನ್ನಟ್ಟಿ ಓಡಿಬಂದರು ನನ್ನ ಹಿಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಿಷ್ಕಾರಣವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:52
15 ತಿಳಿವುಗಳ ಹೋಲಿಕೆ  

ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಧಿಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?


ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.


ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?


ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.


ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು