Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:54 - ಪರಿಶುದ್ದ ಬೈಬಲ್‌

54 ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಪ್ರವಾಹವು ನನ್ನನ್ನು ಮುಳುಗಿಸಿತು; ಆಗ ಸತ್ತೆ ಎಂದುಕೊಂಡೆ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ನನ್ನ ತಲೆಯ ಮೇಲೆ ನೀರು ಹರಿಯಿತು. ಆಗ ನಾನು ನಾಶವಾದೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:54
15 ತಿಳಿವುಗಳ ಹೋಲಿಕೆ  

ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು.


ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು.


ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.


ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.


ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು