ಪ್ರಲಾಪಗಳು 3:58 - ಪರಿಶುದ್ದ ಬೈಬಲ್58 ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. ನನ್ನ ಪ್ರಾಣವನ್ನು ರಕ್ಷಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 “ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ ನನ್ನ ಪ್ರಾಣವನ್ನು ಉಳಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.