Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:61 - ಪರಿಶುದ್ದ ಬೈಬಲ್‌

61 ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 “ಸರ್ವೇಶ್ವರಾ, ನಿನ್ನ ಕಿವಿಗೆ ಬಿದ್ದಿದೆ ನನ್ನ ವೈರಿ ಕಲ್ಪಿಸಿದ ಕುಯುಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಯೆಹೋವನೇ, ಅವರ ದೂಷಣೆಯೂ ನನಗೆ ವಿರುದ್ಧವಾಗಿ ಅವರು ಕಲ್ಪಿಸಿದ ಕುಯುಕ್ತಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಯೆಹೋವ ದೇವರೇ, ಅವರ ಎಲ್ಲಾ ಕಲ್ಪನೆಗಳನ್ನೂ ಮತ್ತು ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:61
6 ತಿಳಿವುಗಳ ಹೋಲಿಕೆ  

ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.


ಯೆಹೋವನು ಹೀಗೆನ್ನುತ್ತಾನೆ, “ಮೋವಾಬ್ಯರೂ ಅಮ್ಮೋನ್ಯರೂ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ. ಅವರು ನನ್ನ ಜನರನ್ನೂ ಕೆಣಕಿದರು. ಅವರ ಪ್ರದೇಶಗಳನ್ನು ಎಳೆದುಕೊಂಡು ತಮ್ಮ ರಾಜ್ಯಗಳನ್ನು ವಿಸ್ತರಿಸಿದರು.


ಯೆಹೋವನೇ ನಿನ್ನ ಸೇವಕನಿಗೆ ಜನರು ಮಾಡಿದ ಅವಮಾನವನ್ನು ದಯವಿಟ್ಟು ಜ್ಞಾಪಿಸಿಕೊ. ಯೆಹೋವನೇ, ನಿನ್ನ ಶತ್ರುಗಳಿಂದ ಅವಮಾನಕರವಾದ ಮಾತುಗಳನ್ನು ನಾನು ಕೇಳಬೇಕಾಯಿತು. ನೀನು ಅಭಿಷೇಕಿಸಿದ ರಾಜನನ್ನು ಅವರು ಅವಮಾನ ಮಾಡಿದರು!


ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.


ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.


ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು