ಪ್ರಲಾಪಗಳು 4:10 - ಪರಿಶುದ್ದ ಬೈಬಲ್10 ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕರುಣಿಗಳಾದ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡಿದ್ದಾರೆ; ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಿಗಳಿಗೆ ತಿಂಡಿಯಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು. ಅಧ್ಯಾಯವನ್ನು ನೋಡಿ |