Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:16 - ಪರಿಶುದ್ದ ಬೈಬಲ್‌

16 ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದರಿಸಿದೆ; ಆತನು ಇನ್ನು ಕಟಾಕ್ಷಿಸನು. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:16
20 ತಿಳಿವುಗಳ ಹೋಲಿಕೆ  

ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ.


ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


“‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’


ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.”


ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೆರಾಯ ಮತ್ತು ಚೆಫನ್ಯರನ್ನು ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದ್ವಾರಪಾಲಕರನ್ನು ಕೂಡ ಸೆರೆಹಿಡಿಯಲಾಯಿತು.


ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.


ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು.


ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು