ಪ್ರಲಾಪಗಳು 4:17 - ಪರಿಶುದ್ದ ಬೈಬಲ್17 ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು. ಅಧ್ಯಾಯವನ್ನು ನೋಡಿ |
ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.