Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:20 - ಪರಿಶುದ್ದ ಬೈಬಲ್‌

20 ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:20
27 ತಿಳಿವುಗಳ ಹೋಲಿಕೆ  

ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.


ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.


ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


“ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.


ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.


ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಹಾಕಿದನು.”


ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.


ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.


ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೊ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು.


ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!


ನಾನು ನಿನಗೆ ಕೇಡುಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜ!’


ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.


ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.


ಸಮುವೇಲನು ಇಸ್ರೇಲರಿಗೆ, “ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ಈ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಈ ಇಬ್ಬರು ಸಾಕ್ಷಿಗಳಾಗಿದ್ದಾರೆ” ಎಂದು ಹೇಳಿದನು. ಜನರು, “ಹೌದು, ಯೆಹೋವನೇ ಸಾಕ್ಷಿ” ಎಂದು ಉತ್ತರಿಸಿದರು.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ,


ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.


ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.


ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.


“ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.


ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು