Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:21 - ಪರಿಶುದ್ದ ಬೈಬಲ್‌

21 ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:21
24 ತಿಳಿವುಗಳ ಹೋಲಿಕೆ  

“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.


ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.”


“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.


ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.


ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.


ದೀಶಾನನಿಗೆ ಊಚ್ ಮತ್ತು ಅರಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು.


“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು