ಪ್ರಲಾಪಗಳು 4:5 - ಪರಿಶುದ್ದ ಬೈಬಲ್5 ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕೆಟ್ಟು ಅಲೆಯುತ್ತಾರೆ; ಚಿಕ್ಕತನದಿಂದಲೂ ಸಕಲಾತಿಯನ್ನು ಹೊದೆಯುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |