ಪ್ರಲಾಪಗಳು 4:6 - ಪರಿಶುದ್ದ ಬೈಬಲ್6 ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”
“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.