Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:9 - ಪರಿಶುದ್ದ ಬೈಬಲ್‌

9 ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:9
10 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.


“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.


ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.


ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.


ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು