Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಮಗಾದ ದುರ್ಗತಿಯನ್ನು ಚಿತ್ತಕ್ಕೆ ತಂದುಕೋ; ನಾವು ಗುರಿಯಾಗಿರುವ ದೂಷಣೆಯನ್ನು ದೃಷ್ಟಿಸಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:1
26 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು.


ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ.


ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.


ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.


ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.


ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿ ಮಾಡಿದರು.


ನೆಹೆಮೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ, “ನಮ್ಮ ದೇವರೇ, ನಮ್ಮ ಪ್ರಾರ್ಥನೆಗೆ ಕಿವಿಗೊಡು. ಆ ಮನಷ್ಯರು ನಮ್ಮನ್ನು ದ್ವೇಷಿಸುತ್ತಾರೆ. ಸನ್ಬಲ್ಲಟನು ಮತ್ತು ಟೋಬೀಯನು ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಆ ಕೇಡುಗಳು ಅವರಿಗೇ ಸಂಭವಿಸಲಿ. ಅವರು ನಾಚಿಕೆಯಿಂದ ತಲೆತಗ್ಗಿಸಲಿ; ಸೆರೆಹಿಡಿಯಲ್ಪಟ್ಟವರಂತೆ ಅವಮಾನ ಹೊಂದಲಿ.


ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


“ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.


ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?


ದೇವರೇ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೋ, ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ.


“ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, ‘ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು.’


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ.


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ಯೆಹೋವನೇ, ಕೆಳಗಿರುವ ನಮ್ಮನ್ನು ನೀನು ಬಗ್ಗಿ ನೋಡುವತನಕ ನಾನು ಗೋಳಾಡುತ್ತಲೇ ಇರುವೆನು! ನೀನು ಪರಲೋಕದಿಂದ ನಮ್ಮನ್ನು ನೋಡುವತನಕ ನಾನು ಗೋಳಾಡುತ್ತಲೇ ಇರುವೆನು.


ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.


“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು