Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:16 - ಪರಿಶುದ್ದ ಬೈಬಲ್‌

16 ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:16
25 ತಿಳಿವುಗಳ ಹೋಲಿಕೆ  

ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ದೇವರು ನನ್ನ ಗೌರವವನ್ನು ತೆಗೆದುಹಾಕಿದ್ದಾನೆ. ಆತನು ನನ್ನ ತಲೆಯಿಂದ ಕಿರೀಟವನ್ನು ತೆಗೆದುಹಾಕಿದ್ದಾನೆ.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.


“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.


ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


“ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.


ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು