Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:20 - ಪರಿಶುದ್ದ ಬೈಬಲ್‌

20 ಯೆಹೋವನೇ, ನೀನು ನಮ್ಮನ್ನು ಶಾಶ್ವತವಾಗಿ ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದುಬಿಟ್ಟಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವದೇಕೆ? ಏಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ನಮ್ಮನ್ನು ಯಾವಾಗಲೂ ಮರೆಯುವುದೇಕೆ? ಇಷ್ಟುಕಾಲ ನಮ್ಮನ್ನು ಮರೆತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:20
15 ತಿಳಿವುಗಳ ಹೋಲಿಕೆ  

ನೀನು ನಮಗೆ ಮರೆಯಾಗಿರುವುದೇಕೆ? ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತುಬಿಟ್ಟಿರುವೆಯಾ?


ಯೆಹೋವನೇ, ನನ್ನನ್ನು ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?


ಯೆಹೋವನೇ, ಇನ್ನೆಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೋ?


ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?


ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?


ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?


ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.


ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”


ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು