ಪ್ರಲಾಪಗಳು 5:21 - ಪರಿಶುದ್ದ ಬೈಬಲ್21 ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿಯೋ, ಏನೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ. ಅಧ್ಯಾಯವನ್ನು ನೋಡಿ |
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.