Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:3 - ಪರಿಶುದ್ದ ಬೈಬಲ್‌

3 ನಾವು ಅನಾಥರಾಗಿದ್ದೇವೆ. ನಮಗೆ ತಂದೆಯೇ ಇಲ್ಲ. ನಮ್ಮ ತಾಯಂದಿರು ವಿಧವೆಗಳಂತಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಿಗಳು ವಿಧವೆಯ ಗತಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಅನಾಥರು, ತಂದೆ ಇಲ್ಲದವರು, ನಮ್ಮ ತಾಯಂದಿರು ವಿಧವೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:3
5 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು