ಪ್ರಲಾಪಗಳು 5:5 - ಪರಿಶುದ್ದ ಬೈಬಲ್5 ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಿಂದಟ್ಟಿ ಬಂದವರು ಹಿಡಿದರು ನಮ್ಮ ಕುತ್ತಿಗೆ ಬಳಲಿ ಬೆಂಡಾಗಿದ್ದೇವೆ ವಿಶ್ರಾಂತಿಯಿಲ್ಲದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮನ್ನು ಹಿಂದಟ್ಟುವವರು ನಮ್ಮ ಹೆಗ್ಗತ್ತನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ. ಅಧ್ಯಾಯವನ್ನು ನೋಡಿ |
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.
ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”