Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:9 - ಪರಿಶುದ್ದ ಬೈಬಲ್‌

9 ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿ ಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:9
9 ತಿಳಿವುಗಳ ಹೋಲಿಕೆ  

ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.


‘ಇಲ್ಲ, ನಾವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡುವೆವು. ಅಲ್ಲಿ ನಮಗೆ ಯುದ್ಧದ ಭಯವಿಲ್ಲ. ಯುದ್ಧದ ತುತ್ತೂರಿಗಳ ಶಬ್ಧವು ಕೇಳುವುದಿಲ್ಲ; ಅಲ್ಲಿ ನಮಗೆ ಹಸಿವೆ ಇರುವುದಿಲ್ಲ’ ಎಂದು ನೀವು ಹೇಳಬಹುದು.


“ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು