Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:1 - ಪರಿಶುದ್ದ ಬೈಬಲ್‌

1 ದಾವೀದನ ಮಗನೂ ಜೆರುಸಲೇಮಿನಲ್ಲಿ ಆಳುತ್ತಿದ್ದ ರಾಜನೂ ಆಗಿದ್ದ ಪ್ರಸಂಗಿಯ ಮಾತುಗಳು. ಪ್ರಸಂಗಿಯು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಮಗನೂ ಜೆರುಸಲೇಮನ್ನು ಆಳುವ ಅರಸನೂ ಆದ ಉಪದೇಶಕನ ಪ್ರವಚನಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನ ಮಗನೂ ಯೆರೂಸಲೇವಿುನಲ್ಲಿ ಆಳುವ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನ ಮಗನೂ ಯೆರೂಸಲೇಮಿನ ಅರಸನೂ ಆದ ಪ್ರಸಂಗಿಯ ಮಾತುಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:1
13 ತಿಳಿವುಗಳ ಹೋಲಿಕೆ  

ಪ್ರಸಂಗಿಯಾದ ನಾನು ಜೆರುಸಲೇಮಿನಲ್ಲಿ ಇಸ್ರೇಲರಿಗೆ ರಾಜನಾಗಿದ್ದೆನು.


ಪ್ರಸಂಗಿಯು ಹೀಗೆನ್ನುತ್ತಾನೆ: “ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತಳನ್ನೂ ನಾನು ಕಾಣಲಿಲ್ಲ.


ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.


ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು.


ಜೆರುಸಲೇಮಿನಲ್ಲಿ ಸೊಲೊಮೋನನು ನಲವತ್ತು ವರ್ಷಗಳ ಕಾಲ ಇಸ್ರೇಲರನ್ನು ಆಳಿದನು.


“ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”


ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು.


ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು