Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:13 - ಪರಿಶುದ್ದ ಬೈಬಲ್‌

13 ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:13
22 ತಿಳಿವುಗಳ ಹೋಲಿಕೆ  

ದೇವರು ಮನುಷ್ಯರಿಗೆ ಕೊಟ್ಟಿರುವ ಪ್ರಯಾಸದ ಕೆಲಸವನ್ನೆಲ್ಲಾ ನೋಡಿದ್ದೇನೆ.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.


ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.


ಆದ್ದರಿಂದ ಮಗನೇ, ಆ ಉಪದೇಶಗಳನ್ನು ಅಧ್ಯಯನ ಮಾಡು, ಆದರೆ ಬೇರೆ ಪುಸ್ತಕಗಳ ಬಗ್ಗೆ ಎಚ್ಚರಿಕೆಯಿಂದಿರು. ಜನರು ಯಾವಾಗಲೂ ಪುಸ್ತಕಗಳನ್ನು ಬರೆಯುತ್ತಿರುತ್ತಾರೆ; ಅತಿಯಾದ ಅಧ್ಯಯನವು ನಿನ್ನನ್ನು ತುಂಬ ಆಯಾಸಗೊಳಿಸುತ್ತದೆ.


ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.


ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸಪಡುತ್ತಾರೆ. ಇದು ಅವರಿಗೆ ಹಾನಿಕರ.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.


ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ.


ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.


ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.


“ಜ್ಞಾನವನ್ನು ಪಡೆಯಲು ನೀನು ನಿರ್ಧರಿಸಿದಾಗಲೇ ಜ್ಞಾನವು ನಿನ್ನಲ್ಲಿ ಆರಂಭವಾಗುತ್ತದೆ. ಆದ್ದರಿಂದ ವಿವೇಕವನ್ನು ಪಡೆಯಲು ನಿನಗಿರುವದನ್ನೆಲ್ಲಾ ಉಪಯೋಗಿಸು. ಆಗ ನೀನು ವಿವೇಕಿಯಾಗುವೆ.


ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು.


ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.


ಈ ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು.


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೋ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ.


ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು