Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:6 - ಪರಿಶುದ್ದ ಬೈಬಲ್‌

6 ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಾಳಿಯು ತೆಂಕಣಕ್ಕೆ ಬೀಸಿ ಬಡಗಣಕ್ಕೆ ತಿರುಗುವದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:6
11 ತಿಳಿವುಗಳ ಹೋಲಿಕೆ  

ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.


ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೋ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ.


ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು.


ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು.


ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ.


ದಕ್ಷಿಣ ದಿಕ್ಕಿನಿಂದ ಬಿರುಗಾಳಿಯೂ ಉತ್ತರ ದಿಕ್ಕಿನಿಂದ ಚಳಿಗಾಳಿಯೂ ಬರುತ್ತವೆ.


ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದುಹೋಗುವುದರಲ್ಲಿತ್ತು.


ನದಿಗಳು ಎಲ್ಲಿಗೆ ಹರಿದುಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು