ಪ್ರಸಂಗಿ 1:8 - ಪರಿಶುದ್ದ ಬೈಬಲ್8 ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.