Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:17 - ಪರಿಶುದ್ದ ಬೈಬಲ್‌

17 ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟುಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇಶವೇ, ನಿನ್ನ ರಾಜನು ಕುಲೀನನಾಗಿದ್ದು ಪ್ರಭುಗಳು ಅಮಲನ್ನೊಲ್ಲದೆ ಶಕ್ತಿಗೊಳ್ಳುವೆವೆಂದು ಸರಿಯಾದ ಸಮಯದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:17
6 ತಿಳಿವುಗಳ ಹೋಲಿಕೆ  

ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ.


ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು