ಪ್ರಸಂಗಿ 10:19 - ಪರಿಶುದ್ದ ಬೈಬಲ್19 ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು. ಅಧ್ಯಾಯವನ್ನು ನೋಡಿ |
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.