Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:5 - ಪರಿಶುದ್ದ ಬೈಬಲ್‌

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ದೊರೆಯ ಪ್ರಮಾದದಿಂದಾದದ್ದೆಂದು ತೋರುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:5
10 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


ಈ ಲೋಕದಲ್ಲಿ ಮತ್ತೊಂದು ಅನ್ಯಾಯವನ್ನು ಕಂಡಿದ್ದೇನೆ. ಅದನ್ನು ಗ್ರಹಿಸಿಕೊಳ್ಳುವುದಕ್ಕೂ ಕಷ್ಟ.


ಲೋಕದಲ್ಲಿ ಮತ್ತೊಂದು ವ್ಯರ್ಥವನ್ನು ಕಂಡೆನು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು.


ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ಘನವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು.


ಮೂಢನಿಗೆ ಐಶ್ವರ್ಯವು ಸೂಕ್ತವಲ್ಲ; ರಾಜಕುಮಾರರ ಮೇಲೆ ದೊರೆತನ ಮಾಡುವುದು ಗುಲಾಮನಿಗೆ ಮತ್ತಷ್ಟು ಸೂಕ್ತವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು