Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:2 - ಪರಿಶುದ್ದ ಬೈಬಲ್‌

2 ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:2
22 ತಿಳಿವುಗಳ ಹೋಲಿಕೆ  

ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ಈ ದಿನಗಳು ಕೆಟ್ಟವುಗಳಾಗಿವೆ. ಆದ್ದರಿಂದ ನಿಮಗಿರುವ ಪ್ರತಿಯೊಂದು ಅವಕಾಶವನ್ನು ಒಳ್ಳೆಯದಕ್ಕಾಗಿ ಉಪಯೋಗಿಸಿರಿ.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು.


ಯೇಸು, “ಏಳು ಸಲಕ್ಕಿಂತಲೂ ಹೆಚ್ಚಾಗಿ ಕ್ಷಮಿಸಬೇಕು. ಅವನು ನಿನಗೆ ಎಪ್ಪತ್ತೇಳು ಸಲ ತಪ್ಪು ಮಾಡಿದರೂ ನೀನು ಅವನನ್ನು ಕ್ಷಮಿಸುತ್ತಲೇ ಇರಬೇಕೆಂದು ನಾನು ನಿನಗೆ ಹೇಳುತ್ತೇನೆ” ಎಂದನು.


ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.


ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.


ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.


ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು.


ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.


ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು